ಪಂಜಾಬ್: ಬಿಜೆಪಿಗೆ ಸೇರ್ಪಡೆಗೊಂಡ ಕಾಂಗ್ರೆಸ್ ಶಾಸಕ 6 ದಿನಗಳಲ್ಲಿ ಮತ್ತೆ ಕಾಂಗ್ರೆಸ್ ಗೆ!

Spread the love
ಪಂಜಾಬ್ ನಲ್ಲಿ ಚುನಾವಣೆ ಸಮೀಪಿಸುತ್ತಿರುವ ನಡುವೆಯೇ ಸಾಕಷ್ಟು ರಾಜಕೀಯ ಬೆಳವಣಿಗೆ ನಡೆಯುತ್ತಿದೆ.

ಪಂಜಾಬ್ ವಿಧಾನಸಭಾ ಚುನಾವಣೆಗೂ ಮುನ್ನವೇ ಪಕ್ಷಾಂತರ ಪರ್ವ ಮುಂದುವರಿದಿದ್ದು, ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ್ದ ಕಾಂಗ್ರೆಸ್ ಶಾಸಕರೊಬ್ಬರು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಾಗಿ ವರದಿ ತಿಳಿಸಿದೆ.

ಹರ್ ಗೋವಿಂಹರ್ ಗೋವಿಂದ್ ಪುರದ ಕಾಂಗ್ರೆಸ್ ಶಾಸಕರ ಬಲ್ವಿಂದರ್ ಸಿಂಗ್ ಲಡ್ಡಿ ಆರು ದಿನಗಳ ಹಿಂದೆ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಆದರೆ ದಿಢೀರ್ ಬೆಳವಣಿಗೆಯಲ್ಲಿ ಭಾನುವಾರ ರಾತ್ರಿ ಕಾಂಗ್ರೆಸ್ ಉಸ್ತುವಾರಿ ಹರೀಶ್ ಚೌಧರಿ ಹಾಗೂ ಡೆಪ್ಯುಟಿ ಸಿಎಂ ಸುಖ್ ಜಿಂದರ್ ಸಿಂಗ್ ರಾಂಧವಾ ಅವರು ಆಯೋಜಿಸಿದ್ದ ಪುಟ್ಟ ಕಾರ್ಯಕ್ರಮದಲ್ಲಿ ಲಡ್ಡಿ ಬಿಜೆಪಿ ತೊರೆದು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ ಎಂದು ವರದಿ ಹೇಳಿದೆ. ಗೋವಿಂದ್ ಪುರದ ಕಾಂಗ್ರೆಸ್ ಶಾಸಕರ ಬಲ್ವಿಂದರ್ ಸಿಂಗ್ ಲಡ್ಡಿ ಆರು ದಿನಗಳ ಹಿಂದೆ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಆದರೆ ದಿಢೀರ್ ಬೆಳವಣಿಗೆಯಲ್ಲಿ ಭಾನುವಾರ ರಾತ್ರಿ ಕಾಂಗ್ರೆಸ್ ಉಸ್ತುವಾರಿ ಹರೀಶ್ ಚೌಧರಿ ಹಾಗೂ ಡೆಪ್ಯುಟಿ ಸಿಎಂ ಸುಖ್ ಜಿಂದರ್ ಸಿಂಗ್ ರಾಂಧವಾ ಅವರು ಆಯೋಜಿಸಿದ್ದ ಪುಟ್ಟ ಕಾರ್ಯಕ್ರಮದಲ್ಲಿ ಲಡ್ಡಿ ಬಿಜೆಪಿ ತೊರೆದು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ ಎಂದು ವರದಿ ಹೇಳಿದೆ.

ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಕ್ಕೆ ಲಡ್ಡಿ ಅವರ ಟ್ವೀಟರ್ ಖಾತೆಯಲ್ಲಿ ಅಭಿನಂದನೆಗಳ ಸಂದೇಶ ಪೋಸ್ಟ್ ಆಗುತ್ತಲೇ ಇದ್ದು, ಕೆಲವೊಂದಕ್ಕೆ ಲಡ್ಡಿ ಅವರು ರೀ ಟ್ವೀಟ್ ಕೂಡಾ ಮಾಡಿರುವುದಾಗಿ ವರದಿ ತಿಳಿಸಿದೆ.

ಪಂಜಾಬ್ ನಲ್ಲಿ ಚುನಾವಣೆ ಸಮೀಪಿಸುತ್ತಿರುವ ನಡುವೆಯೇ ಸಾಕಷ್ಟು ರಾಜಕೀಯ ಬೆಳವಣಿಗೆ ನಡೆಯುತ್ತಿದೆ. ಇತ್ತೀಚೆಗಷ್ಟೇ ಮತ್ತೊಬ್ಬ ಕಾಂಗ್ರೆಸ್ ಶಾಸಕ ಫತೇಹ್ ಜಂಗ್ ಸಿಂಗ್ ಬಾಜ್ವಾ ಕೂಡಾ ಬಿಜೆಪಿಗೆ ಸೇರ್ಪಡೆಯಾಗಿದ್ದರು.

Right Click Disabled