ಕರ್ಫ್ಯೂನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕೊಡದಿದ್ದರೆ ದಿನಕ್ಕೆ ಎಷ್ಟು ನಷ್ಟ ಗೊತ್ತ!
ವೀಕೆಂಡ್ ಕರ್ಫ್ಯೂ ವೇಳೆ ಮದ್ಯ ಮಾರಾಟಕ್ಕೆ ಅವಕಾಶ ನೀಡುವ ವಿಚಾರವಾಗಿ ಸಂಪುಟ ಸಭೆಯಲ್ಲಿ ಅಬಕಾರಿ ಸಚಿವ ಗೋಪಾಲಯ್ಯ ಪ್ರಸ್ತಾಪ ಮಾಡಿದ್ದಾರೆ.
ಮದ್ಯ ಮಾರಾಟಕ್ಕೆ ಅವಕಾಶ ಕೊಡುವಂತೆ ಸಚಿವರು ಪ್ರಸ್ತಾಪಿಸಿದ್ದಾರೆ. ಮದ್ಯ ಮಾರಾಟಕ್ಕೆ ಅವಕಾಶ ಕೊಡದಿದ್ದರೆ ದಿನಕ್ಕೆ 75 ಕೋಟಿ ರೂ. ನಷ್ಟವಾಗುತ್ತದೆ.
ಹೀಗಾಗಿ, ವೀಕೆಂಡ್ ಕರ್ಫ್ಯೂ ವೇಳೆಯಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬೇಕು ಎಂದು ಸಚಿವ ಗೋಪಾಲಯ್ಯ ಹೇಳಿದ್ದಾರೆ. ಅವರ ಮಾತಿಗೆ ಸಚಿವ ಜೆ.ಸಿ. ಮಾಧುಸ್ವಾಮಿ ಬೆಂಬಲ ಸೂಚಿಸಿದ್ದಾರೆ.
ವೀಕೆಂಡ್ನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕೊಡಬಹುದು ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ. ಬೆಳಗಿನ ಅವಧಿಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕೊಡಬಹುದು ಎಂದಿದ್ದಾರೆ. ಆದರೆ, ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ.
ಈಗಾಗಲೇ ವೀಕೆಂಡ್ನಲ್ಲಿ ಹೋಟೆಲ್, ಬಾರ್, ರೆಸ್ಟೋರೆಂಟ್ ಬಂದ್ ಮಾಡಿಸಲು ಸುತ್ತೋಲೆ ಹೊರಡಿಸಲಾಗಿದೆ. ಕನಕಪುರ ವೃತ್ತದ ಎಲ್ಲಾ ಪಿಎಸ್‌ಐಗಳಿಗೆ ಸರ್ಕಾರದಿಂದ ಸುತ್ತೋಲೆ ನೀಡಲಾಗಿದೆ.