ಮುಖ್ಯಮಂತ್ರಿಗೆ ಪರ್ಯಾಯೋತ್ಸವಕ್ಕೆ ಆಮಂತ್ರಣ

Spread the love

ಉಡುಪಿ: ಭಾವಿ ಕೃಷ್ಣಾಪುರ ಮಠದ ಪರ್ಯಾಯೋತ್ಸವಕ್ಕೆ ಭರದಿಂದ ಸಿದ್ಧತೆಗಳು ನಡೆಯುತ್ತಿದ್ದು ಗುರುವಾರ ಪರ್ಯಾಯೋತ್ಸವ ಸಮಿತಿ ಗೌರವ ಕಾರ್ಯಾಧ್ಯಕ್ಷ ಹಾಗೂ ಶಾಸಕರೂ ಆದ ಕೆ.ರಘುಪತಿ ಭಟ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಮಾಡಿ ಪರ್ಯಾಯೋತ್ಸವಕ್ಕೆ ಅಧಿಕೃತವಾಗಿ ಆಹ್ವಾನ ನೀಡಿದರು.

ಇದೇವೇಳೆ ಐತಿಹಾಸಿ ಉಡುಪಿ ಪರ್ಯಾಯೋತ್ಸವ ಸುಗಮವಾಗಿ ನಡೆಸಲು ಅನುಕೂಲ ಕಲ್ಪಿಸಸುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಸ್ಪಂದಿಸಿದ ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ಈ ಸಂದರ್ಭ ಜಲಸಂಪನ್ಮೂಲ ಸಚಿವರಾದ ಗೋವಿಂದ ಎಂ. ಕಾರಜೋಳ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯ ರವಿಕುಮಾರ್, ಭಾರತಿ ಶೆಟ್ಟಿ ಮತ್ತು ಪರ್ಯಾಯೋತ್ಸವ ಸಮಿತಿಯ ಉಪಾಧ್ಯಕ್ಷರಾದ ಶ್ರೀಪತಿ ಭಟ್ ಉಚ್ಚಿಲ, ಪ್ರಧಾನ ಕಾರ್ಯದರ್ಶಿ ವಿಷ್ಣು ಪ್ರಸಾದ್ ಪಾಡಿಗಾರ್, ಆರ್ಥಿಕ ಸಮಿತಿ ಸಂಚಾಲಕರಾದ ಜಯಪ್ರಕಾಶ್ ಕೆದ್ಲಾಯ ಇದ್ದರು.

ಇದೇವೇಳೆ ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪರ್ಯಾಯೋತ್ಸವಕ್ಕೆ ಆಹ್ವಾನ ನೀಡಲಾಯಿತು.

Right Click Disabled