ಪ್ರತಿ ಮನೆಗೂ ನೀರು ಪೂರೈಸಲು ನೆರವು: ವಿಶ್ವ ಬ್ಯಾಂಕ್ ನೊಂದಿಗೆ ಒಡಂಬಡಿಕೆ

Spread the love

ಗ್ರಾಮೀಣ ಭಾಗದ (Rural India ) ಮನೆಗಳಿಗೆ ನಳ ನೀರು ಸಂಪರ್ಕ ಒದಗಿಸುವ ಜಲ ಜೀವನ ಮಿಷನ್‌ (Jal Jeevan Mission) ಯೋಜನೆ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರದ (Govt of Karnataka) ಪಾಲು ಪಾವತಿಸುವ ಸಂಬಂಧ ವಿಶ್ವಬ್ಯಾಂಕ್‌ನಿಂದ ಸಾಲ ಪಡೆಯಲು ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ.

ಗುರುವಾರ ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ರಾಜ್ಯದ ಎಲ್ಲಾ ಹಳ್ಳಿಗಳ ಮನೆಗಳಿಗೆ ನಳ ನೀರು ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ (Govt) ಕಾರ್ಯೋನ್ಮುಖವಾಗಿದೆ. ಜಲ ಜೀವನ ಮಿಷನ್‌ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರವು ತಲಾ ಶೇ. 45ರಷ್ಟುಮತ್ತು ಪಂಚಾಯತ್‌ಗಳು ಶೇ.10ರಷ್ಟುಹಣವನ್ನು ಒದಗಿಸಬೇಕಾಗಿದೆ.

ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ (JC Madhuswamy), ಒಟ್ಟು 9152 ಕೋಟಿ ರು. ಮೊತ್ತದ ಯೋಜನೆಯಾಗಿದ್ದು, ಈ ಯೋಜನೆ ಅನುಷ್ಠಾನದಿಂದ ಗ್ರಾಮೀಣ ಭಾಗದ ಮನೆಗಳಿಗೆ ನಳ ನೀರು ಸಂಪರ್ಕ ಕಲ್ಪಿಸಿದಂತಾಗುತ್ತದೆ ಎಂದು ಹೇಳಿದರು.

ಪೌರಸಂಸ್ಥೆ ಅಭಿವೃದ್ಧಿಗೆ 3885 ಕೋಟಿ ರು.:

ನಗರ ಸ್ಥಳೀಯ ಸಂಸ್ಥೆಗಳನ್ನು ಅಭಿವೃದ್ಧಿಪಡಿಸಲು 3885 ಕೋಟಿ ರು. ಮೊತ್ತದಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯ 4ನೇ ಹಂತದ ಕ್ರಿಯಾ ಯೋಜನೆಗೆ ರಾಜ್ಯ ಸಚಿವ ಸಂಪುಟ (Karnataka Cabinet) ಸಭೆ ಒಪ್ಪಿಗೆ ನೀಡಿದೆ. 2022-23ರಿಂದ 24-25ನೇ ಸಾಲಿನ ಕ್ರಿಯಾ ಯೋಜನೆಯನ್ನು ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಸಮಗ್ರ ಅಭಿವೃದ್ಧಿಯನ್ನು ಕೇಂದ್ರೀಕರಿಸಿ ಮೂಲಸೌಲಭ್ಯಗಳ ಕೊರತೆ ನೀಗಿಸಲು ರೂಪಿಸಲಾಗಿದೆ. ಅಮೃತ ನಗರೋತ್ಥಾನ 4ನೇ ಹಂತದ ಯೋಜನೆಯಿಂದ 23 ಜಿಲ್ಲಾ ಕೇಂದ್ರದ ನಗರಸಭೆಗಳು ಮತ್ತು 1ನೇ ದರ್ಜೆಯ ನಗರಸಭೆಗಳಿಗೆ ತಲಾ 40 ಕೋಟಿ ರು.ನಂತೆ ಒಟ್ಟು 920 ಕೋಟಿ ರು. ನಿಗದಿ ಮಾಡಲಾಗಿದೆ. ಉಳಿದ 38 ನಗರಸಭೆಗಳಿಗೆ ತಲಾ 30 ಕೋಟಿ ರು.ನಂತೆ 1140 ಕೋಟಿ ರು. ಹಂಚಿಕೆ ಮಾಡಲಾಗಿದೆ. 124 ಪುರಸಭೆಗಳಿಗೆ ತಲಾ 10 ಕೋಟಿ ರು.ನಂತೆ 1240 ಕೋಟಿ ರು. ಮತ್ತು 117 ಪಟ್ಟಣ ಪಂಚಾಯಿತಿಗಳಿಗೆ ತಲಾ 5 ಕೋಟಿ ರು.ನಂತೆ 585 ಕೋಟಿ ರು. ನೀಡಲಾಗಿದೆ ಎಂದು ಮಾಹಿತಿ ನೀಡಿದರು.

Right Click Disabled