ಪ್ರಧಾನಿ ದೀರ್ಘಾಯುಷ್ಯಕ್ಕಾಗಿ ಬಿಜೆಪಿ ಮಹಿಳಾ ಮೋರ್ಚಾದಿಂದ ಮೃತ್ಯುಂಜಯ ಜಪ, ವಿಶೇಷ ಪೂಜೆ

Spread the love

ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಬೇಟಿ ಸಂದರ್ಭದಲ್ಲಿ ನಿಗದಿತ ಭದ್ರತಾ ಸುರಕ್ಷಾ ಕ್ರಮಗಳನ್ನು ಕೈಗೊಳ್ಳದೇ ಕೀಳು ರಾಜಕೀಯ ಪ್ರದರ್ಶಿಸಿರುವ ಪಂಜಾಬಿನ ಕಾಂಗ್ರೆಸ್ ಸರಕಾರದ ನಡೆಯನ್ನು ಉಡುಪಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ತೀವ್ರವಾಗಿ ಖಂಡಿಸಿದೆ.

ಈ ಸಂಬಂಧ ತಪ್ಪಿತಸ್ಥರ ವಿರುದ್ಧ ಉಗ್ರ ಕ್ರಮವನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರವನ್ನು ಆಗ್ರಹಿಸಿದೆ.

ಈ ವಿಲಕ್ಷಣ ಸನ್ನಿವೇಶದಲ್ಲಿ ಪ್ರಧಾನಿ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಉಡುಪಿ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಮೃತ್ಯುಂಜಯ ಜಪ ಮತ್ತು ವಿಶೇಷ ಪೂಜೆಯನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಹರೀಶ್ ರಾಮ್ ಮುಂತಾದವರು ಉಪಸ್ಥಿತರಿದ್ದರು

Right Click Disabled