ಶಿಕ್ಷಣದಿಂದ ಮಾತ್ರ ದೇಶ ಅಭಿವೃದ್ದಿ- ಶ್ರೀಮತಿ ಭಾಗ್ಯವತಿ ಅಮರೇಶ್ ಬೆಂಗಳೂರು:

Spread the love


ಶಿಕ್ಷಣದಿಂದ ಮಾತ್ರ ದೇಶ ಅಭಿವೃದ್ದಿ ಎಂದು ಅರಣ್ಯ ಅಭಿವೃದ್ದಿ ನಿಗಮದ ನಿರ್ದೇಶಕರಾದ ಶ್ರೀಮತಿ ಭಾಗ್ಯವತಿ ಅಮರೇಶ್ ಹೇಳಿದರು. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಹೊಂಬೇಗೌಡನಗರ ವಾರ್ಡ್ ನ ಸ್ಲಂ ಸಂಸ್ಥೆ ಮತ್ತು ಗರುಡ ಫೌಂಡೇಷನ್ ಸಹಯೋಗದಲ್ಲಿ ಎಮ್.ಎಸ್.ಸಿ. ಓದುತ್ತಿರುವ ವಿದ್ಯಾರ್ಥಿನಿಗೆ ಉಚಿತವಾಗಿ ಲ್ಯಾಪ್ ಟಾಪ್ ವಿತರಿಸಿ ಅವರು ಮಾತನಾಡಿದರು.
ಪ್ರಧಾನಿ ನರೇಂದ್ರಮೋದಿರವರು ಆಡಳಿತದಲ್ಲಿ ಮಕ್ಕಳ ಶಿಕ್ಷಣ್ಕೆ ಹೆಚ್ಚು ಆದ್ಯತೆ ನೀಡಿದ್ದಾರೆ .
ಶಿಕ್ಷಣದಲ್ಲಿ ಕಂಪ್ಯೂಟರ್ ತಂತ್ರಜ್ಞಾನ ಕಲಿತರೆ, ಹೆಚ್ಚಿನ ಉದ್ಯೋಗ ಅವಕಾಶ ಮತ್ತು ಶಿಕ್ಷಣಕ್ಕೆ ಬೇಕಾದ ಮಾಹಿತಿಯನ್ನ ಸಂಗ್ರಹಿಸಬಹುದು. ಅದರೆ ಆರ್ಥಿಕವಾಗಿ ಹಿಂದುಳಿದ ಮಕ್ಕಳು ಲ್ಯಾಪ್ ಟಾಪ್ ಖರೀಸಲು ಸಬಲರಾಗಿರುವುದಿಲ್ಲ. ಉನ್ನತ ಶಿಕ್ಷಣಕ್ಕೆ ಸಹಕಾರಿಯಾಗಲಿ ಎಂದು ನಮ್ಮ ಸಂಸ್ಥೆಯಿಂದ ಇದುವರಗೆ 30ಕ್ಕೂ ಹೆಚ್ಚು ಲ್ಯಾಪ್ ಟಾಪ್ ಗಳನ್ನು ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಸಂಸ್ಥೆಯ ಪದಾಧಿಕಾರಿಗಳು ಭಾಗವಹಿಸಿದ್ದರು.

Right Click Disabled