ಉಡುಪಿ ಶ್ರೀಕೃಷ್ಣ ಮಠಕ್ಕೆ
ಮುಖ್ಯಮಂತ್ರಿಗಳ ಭೇಟಿ
ಉಡುಪಿ:
ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ಶ್ರೀಕೃಷ್ಣನ ದರ್ಶನ ಪಡೆದರು. ಬಳಿಕ ಪರ್ಯಾಯ ಶ್ರೀಕೃಷ್ಣಾಪುರ ಮಠದ ಶ್ರೀಶ್ರೀಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ
ಮೀನುಗಾರಿಕಾ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ, ಉಡುಪಿ ವಿಧಾನಸಭಾ ಕ್ಷೇತ್ರದ
ಶಾಸಕರಾದ ಕೆ.ರಘುಪತಿ ಭಟ್, ಕಂದಾಯ ಸಚಿವ ಆರ್.ಅಶೋಕ್, ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸುಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮುಂತಾದವರು ಉಪಸ್ಥಿತರಿದ್ದರು.