ವಿದ್ಯಾರ್ಥಿಗಳಿಂದ ಕಡಲೆಕಾಯಿ ಪರಿಷೆ ಸಂದರ್ಭದಲ್ಲಿ ತ್ಯಾಜ್ಯ ವಿಲೇವಾರಿ ಕುರಿತ ಬೀದಿ ನಾಟಕ ಪ್ರದರ್ಶನ:

Spread the love

ಬೆಂಗಳೂರು, ನ, 23; ಬಸವನಗುಡಿ ಕಡಲೆಕಾಯಿ ಪರಿಷೆ ಸಂದರ್ಭದಲ್ಲಿ ಪ್ರತಿನಿತ್ಯ ವೈಭವದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿದ್ದು, ಬಸವೇಶ್ವರ ಎಜುಕೇಶನಲ್ ಇನ್ಸ್ಟಿಟ್ಯೂಟ್ ವಿದ್ಯಾರ್ಥಿಗಳು ಸಾಮಾಜಿಕ ಸಂದೇಶ ನೀಡುವ ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಕುರಿತ ಬೀದಿ ನಾಟಕಗಳನ್ನು ಪ್ರದರ್ಶಿಸಿದರು.

ಪ್ರಾಂಶುಪಾಲರಾದ ರಂಗಲಕ್ಷ್ಮಿ ಶ್ರೀನಿವಾಸ್ ಅವರ ಮುಂದಾಳತ್ವದಲ್ಲಿ ಜೂಗಲ್ ರಾಕ್ ಉದ್ಯಾನವನದಲ್ಲಿ ಆಯೋಜಿಸಿದ್ದ ಸಾಂಸ್ಕೃತಿ ಕಾರ್ಯಕ್ರಮ ವೇದಿಕೆಯಲ್ಲಿ ಹಸಿಕಸ – ಒಣಕಸ ವಿಂಗಡಣೆ ಹಾಗೂ ಪ್ಲ್ಯಾಸ್ಟಿಕ್ ತ್ಯಾಜ್ಯದ ದುಷ್ಪರಿಣಾಮ ಕುರಿತ ನಾಟಕಗಳಿಗೆ ಶಾಸಕರಾದ ರವಿ ಸುಬ್ರಮಣ್ಯ ಮತ್ತಿತರ ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದರು.

ಕಡಲೆಕಾಯಿ ಪರಿಷೆ ಆಯೋಜಕರು ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಿದರು.

Right Click Disabled