ಉಪ್ಪಾರ ಸಮುದಾಯವನ್ನು ಎಸ್.ಸಿ/ಎಸ್.ಟಿ ಮೀಸಲಾತಿ ವ್ಯಾಪ್ತಿಗೆ ಸೇರಿಸುವಂತೆ ಒತ್ತಾಯಿಸಿ ಬುಧವಾರ ಬೆಳಗಾವಿ ಸುವರ್ಣ ಸೌಧ ಚಲೋ

Spread the love

ಬೆಂಗಳೂರು,ಡಿ,20; ಉಪ್ಪಾರ ಸಮುದಾಯವನ್ನು ಎಸ್.ಸಿ/ಎಸ್.ಟಿ ಮೀಸಲಾತಿ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದಿಂದ ಬುಧವಾರ [ಡಿ.21] ಬೃಹತ್ ಬೆಳಗಾವಿ ಸುವರ್ಣ ಸೌಧ ಚಲೋ ಹೋರಾಟ ಹಮ್ಮಿಕೊಂಡಿದೆ.

ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ಸಮುದಾಯವನ್ನು ಎಸ್‍ಸಿ, ಎಸ್‍ಟಿ ಮೀಸಲಾತಿ ಪಟ್ಟಿಗೆ ಸೇರಿಸುವ ವಿಚಾರವಾಗಿ ಸುವರ್ಣಸೌಧ ಚಲೋ ಚಳುವಳಿಯನ್ನು ಹಮ್ಮಿಕೊಂಡಿದ್ದು, ಬೆಳಗಾವಿ ಜಿಲ್ಲಾಡಳಿತ ಭವನದ ಮುಂದೆ ಬೃಹತ್ ಪ್ರತಿಭಟನಾ ಪ್ರದರ್ಶನ ಆಯೋಜಿಸಲಾಗಿದೆ ಎಂದು ರಾಜ್ಯ ಉಪ್ಪಾರ ಮಹಾಸಭಾ ಅಧ್ಯಕ್ಷ ವಿಷ್ಣು ರಾ ಲಾತೂರ, ಬೆಂಗಳೂರು ಜಿಲ್ಲಾ ಅಧ್ಯಕ್ಷರಾದ ಸಿ. ಹೆಚ್.ಕೃಷ್ಣಮೂರ್ತಿ ಉಪ್ಪಾರ್ ಮನವಿ ಮಾಡಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಬೀದಿಗಿಳಿದು ಹೋರಾಟ ಮಾಡದಿದ್ದರೆ ನಮ್ಮ ಮೀಸಲಾತಿ ಕನಸು ಈಡೇರಿರುವುದಿಲ್ಲ. ಈ ಹೋರಾಟ ಬರೀ ಹೋರಾಟ ಮಾತ್ರವಲ್ಲ 70 ವರ್ಷಗಳಿಂದ ನಮಗಾಗಿರುವ ಘೋರ ಅನ್ಯಾಯದ ವಿರುದ್ಧವಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.

ಶಿಕ್ಷಣ, ಉದ್ಯೋಗದಿಂದ ವಂಚಿತರಾಗುತ್ತಿರುವ ನಮ್ಮ ಸಮಾಜದ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ. ಸಮುದಾಯವನ್ನು ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಮುಂದೆ ತರುವ ನಿಟ್ಟಿನಲ್ಲಿ ನಾವು ನಿರ್ಣಾಯಕ ಹೋರಾಟಕ್ಕೆ ಅಣಿಯಾಗಿದ್ದೇವೆ ಎಂದು ತಿಳಿಸಿದರು.

ಹೋರಾಟದಲ್ಲಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬಲ ತುಂಬಬೇಕು. ಈ ಅಧಿವೇಶನ ಸಂದರ್ಭದಲ್ಲಿ ನಮ್ಮ ಮನವಿಗೆ ಸರ್ಕಾರ ಕಿವಿಗೊಡದಿದ್ದರೆ ರಾಜ್ಯದಾದ್ಯಂತ ಹೋರಾಟವನ್ನು ತೀವ್ರಗೊಳಿಸುತ್ತೇವೆ ಎಂದು ಹೇಳಿದರು.

Right Click Disabled