ಸುಳ್ಯ ಚನ್ನಕೇಶವ ದೇವರ ಜಾತ್ರೋತ್ಸವದಲ್ಲಿ ವ್ಯಾಪಾರ ಮಾಡಲು ಹಿಂದುಗಳಿಗೆ ಮಾತ್ರ ಅವಕಾಶ. ಉಡುಪಿ ಜಿಲ್ಲಾ ಶ್ರೀರಾಮಸೇನೆ ಹರ್ಷ.

Spread the love

ಸುಳ್ಯ ಜಾತ್ರೋತ್ಸವದಲ್ಲಿ ಎಲ್ಲ ಧರ್ಮೀಯರಿಗೆ ಮುಕ್ತ ವ್ಯಾಪಾರ ಅವಕಾಶ ನೀಡಲಾಗುತ್ತದೆ ಎಂದು ಈ ಹಿಂದೆ ಆಡಳಿತ ಮಂಡಳಿ ಸಭೆಯಲ್ಲಿ ಘೋಷಿಸಲಾಗಿತ್ತು. ಇದನ್ನು ವಿರೋಧಿಸಿ ಹಿಂದೂ ಪರ ಸಂಘಟನೆಗಳು ಹಿಂದುಗಳಿಗೆ ಮಾತ್ರ ಅವಕಾಶ ನೀಡಬೇಕೆಂದು ಸಮಿತಿಯ ಅಧ್ಯಕ್ಷರಿಗೆ ಮನವಿ ಮಾಡಿತ್ತು.
ಇದನ್ನು ಮನಗಂಡ ಜೀವನೋದ್ಧಾರ ಸಮಿತಿ ಅಧ್ಯಕ್ಷ ಡಾಕ್ಟರ್ ಕೆ ವಿ ಚಿದಾನಂದರವರ ನೇತ್ರತ್ವದ ತುರ್ತು ಸಭೆಯಲ್ಲಿ ಸುಳ್ಯ ಚೆನ್ನಕೇಶವ ದೇವಸ್ಥಾನದ ಜಾತ್ರೆಯಲ್ಲಿ ಹಿಂದುಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶವೆಂದು ನಿರ್ಧಾರಕ್ಕೆ ಬರಲಾಗಿದೆ.
ಜೀವನೋದ್ಧಾರ ಸಮಿತಿ ಅಧ್ಯಕ್ಷ ಡಾಕ್ಟರ್ ಕೆ ವಿ ಚಿದಾನಂದ ಹಾಗೂ ಆಡಳಿತ ಮಂಡಳಿ ಸಮಿತಿ ಸದಸ್ಯರು ತೆಗೆದುಕೊಂಡ ಈ ನಿರ್ಧಾರವನ್ನು ಉಡುಪಿ ಜಿಲ್ಲಾ ಶ್ರೀರಾಮ ಸೇನೆಯು ಸ್ವಾಗತಿಸುತ್ತದೆ. ಈಗಾಗಲೇ ಅನ್ಯ ಧರ್ಮೀಯರು ಚೆನ್ನಕೇಶವ ದೇವಸ್ಥಾನ ವ್ಯಾಪಾರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಮಾಹಿತಿಗಳು ನಿಜಕ್ಕೂ ಧರ್ಮ ಧರ್ಮಗಳ ನಡುವೆ ಕಂದಕ ಹುಟ್ಟಿಸುವ ಪ್ರಯತ್ನವಾಗಿದೆ, ಹಾಗೂ ಸಮಿತಿಯವರು ತೆಗೆದುಕೊಂಡ ನಿರ್ಣಯವನ್ನು ಸ್ವಾಗತಿಸುತ್ತೇವೆ ಎಂದು ಉಡುಪಿ ಜಿಲ್ಲಾ ಶ್ರೀರಾಮ ಸೇನೆಯ ಅಧ್ಯಕ್ಷ ಜಯರಾಮ್ ಅಂಬೆಕಲ್ಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Right Click Disabled