ಕಾರವಾರ ತಾಲ್ಲೂಕಿನ ಬಿಜೆಪಿ‌ ಗ್ರಾಮೀಣ ಮಂಡಲ

Spread the love

ಕಾರವಾರದ ವತಿಯಿಂದ ಮಲ್ಲಾಪುರ ಭಾಗದ ಬೂತ್‌ ಸಂಖ್ಯೆ 46 ಮತ್ತು 47 ರಲ್ಲಿ ಬೂತ್‌ ವಿಜಯ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬೂತ್‌ ಅಧ್ಯಕ್ಷರ ಮನೆಯಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.
ಪಕ್ಷ ಸಂಘಟನೆಯಲ್ಲಿ ಬೂತ್ ಕಮಿಟಿ ಅಧ್ಯಕ್ಷರ ಮತ್ತು ಸದಸ್ಯರ ಪಾತ್ರ ಮಹತ್ವದ್ದಾಗಿರುತ್ತದೆ. ಪಕ್ಷವು ನೀಡಿದ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಿಸುವ ಕಾರ್ಯ ಪ್ರತಿ ಬೂತ್‌ನಲ್ಲಿ ಮಾಡಬೇಕು ಮತ್ತು ಪಕ್ಷ ಬಲವರ್ದನೆಗೆ ಶ್ರಮಿಸಬೇಕು.
ಈ ಸಂದರ್ಭದಲ್ಲಿ ಬಿಜೆಪಿ ಕಾರವಾರ ಗ್ರಾಮೀಣ ಮಂಡಲದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮಹಾಶಕ್ತಿ ಕೇಂದ್ರ, ಶಕ್ತಿಕೇಂದ್ರದ ಪ್ರಮುಖರು, ವಿವಿಧ ಮೋರ್ಚಾ ಪದಾಧಿಕಾರಿಗಳು, ಪ್ರಮುಖರು, ಪಕ್ಷದ ಬೂತ್ ಕಮಿಟಿಯವರು, ಕಾರ್ಯಕರ್ತರು, ಉಪಸ್ಥಿತರಿದ್ದರು.

Right Click Disabled