ಕರ್ನಾಟಕ ಸ್ಟೇಟ್ ಮಿನರಲ್ ಕಾರ್ಪೊರೇಷನ್ ಲಿಮಿಟೆಡ್ ನೂತನ ಅಧ್ಯಕ್ಷರಾಗಿ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಮಸಾಲ ಜಯರಾಮ್ ಅಧಿಕಾರ ಸ್ವೀಕಾರ.

Spread the love

ಬೆಂಗಳೂರು: ಶಾಂತಿನಗರದ ಬಿ.ಎಂ.ಟಿ.ಸಿ. ಕಟ್ಟಡದಲ್ಲಿನ ಟಿ.ಟಿ.ಎಂ.ಸಿ, ಎ.ಬ್ಲಾಕ್ ನ ಐದನೇ ಮಹಡಿಯ ಕೇಂದ್ರ ಕಚೇರಿಯಲ್ಲಿ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಸಾಲ ಜಯರಾಮ್ ರವರು, ಕರ್ನಾಟಕ ಸ್ಟೇಟ್ ಮಿನರಲ್ ಕಾರ್ಪೊರೇಷನ್ ಲಿಮಿಟೆಡ್ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ತುರುವೇಕೆರೆ ವಿಧಾನಸಭಾ ಕ್ಷೇತ್ರದ ನೂರಾರು ಅಭಿಮಾನಿಗಳು, ಬೆಂಬಲಿಗರು, ಬಿ.ಜೆ.ಪಿ ಪಕ್ಷದ ಕಾರ್ಯಕರ್ತರು, ಮುಖಂಡರುಗಳು ಮತ್ತು ಕರ್ನಾಟಕ ಸ್ಟೇಟ್ ಮಿನರಲ್ ಕಾರ್ಪೊರೇಷನ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರು ಮತ್ತು ಆಡಳಿತ ಮಂಡಳಿ ನೂತನ ಅಧ್ಯಕ್ಷರನ್ನು ಅಭಿನಂದಿಸಿ, ಗೌರವಿಸಿದ್ದಾರೆ.

ವರದಿ- ಸಚಿನ್ ಮಾಯಸಂದ್ರ.

Right Click Disabled