ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ *6 ರೋಗಿಗಳು ಅಂಗದಾನ ಕಾರ್ಯಕ್ರಮದಿಂದ ಪ್ರಯೋಜನ ಪಡೆದರು

Spread the love


  • ಮಣಿಪಾಲ, 27ನೇ ಜೂನ್ 2023: 44 ವರ್ಷದ ಶ್ರೀಮತಿ ಕೊಡೇರಿ ಶಿಲ್ಪಾ ಮಾಧವರವರಿಗೆ ಬೈಂದೂರು ತಾಲೂಕಿನ ಮರವಂತೆ ಬಳಿ 25.02.2023ರಂದು ಮದ್ಯಾಹ್ನ 1.30 ಗಂಟೆಗೆ ರಸ್ತೆ ಅಪಘಾತ ಸಂಭವಿಸಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ದಿನಾಂಕ 25.02.2023ರಂದು ಸಂಜೆ 4.58 ಕ್ಕೆ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು . ಶ್ರೀ ಪ್ರಸನ್ನ ಕುಮಾರ್ ಇವರ ಪತ್ನಿಯಾದ ಶ್ರೀಮತಿ ಕೊಡೇರಿ ಶಿಲ್ಪಾ ಮಾಧವ ಅವರು ಅಪಘಾತದ ಪರಿಣಾಮದಿಂದ ತೀವ್ರತರವಾದ ಗಾಯವನ್ನು ಹೊಂದಿದ್ದರು.

ನಮ್ಮ ವೈದ್ಯರು ಶ್ರೀಮತಿ ಕೊಡೇರಿ ಶಿಲ್ಪಾ ಮಾಧವ ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ, ಅವರು ಚೇತರಿಸಿಕೊಳ್ಳುವ ಯಾವುದೇ ಲಕ್ಷಣಗಳು ಕಂಡುಬರಲಿಲ್ಲ . ಮಾನವ ಅಂಗಾಂಗ ಕಸಿ ಕಾಯ್ದೆ 1994 ರ ಅನುಸಾರ ಶ್ರೀಮತಿ ಕೊಡೇರಿ ಶಿಲ್ಪಾ ಮಾಧವ ಅವರನ್ನು ಎರಡು ಬಾರಿ ಪರಿಶೀಲಿಸಿ, ಅಧಿಕೃತವಾಗಿ ಪರಿಣಿತ ವೈದ್ಯರ ತಂಡವು ರೋಗಿಯ ಮೆದುಳು ನಿಷ್ಕ್ರೀಯಗೊಂಡಿದೆ ಎಂದು ಘೋಷಿಸಿದರು. ಮೊದಲನೆಯದು 26.02.2023 ರಂದು ಸಂಜೆ 6.29ಕ್ಕೆ ಮತ್ತು ಎರಡನೆಯದು 27.02.2023ರಂದು ಬೆಳಿಗ್ಗೆ 1.35 ಕ್ಕೆ.
ತರುವಾಯ, ಶ್ರೀಮತಿ ಕೊಡೇರಿ ಶಿಲ್ಪಾ ಮಾಧವ ಅವರ ಪತಿ ಶ್ರೀ ಪ್ರಸನ್ನ ಕುಮಾರ್ ಮತ್ತು ಅವರ ಕುಟುಂಬ ಸದಸ್ಯರು ಇತರ ರೋಗಿಗಳ ಜೀವ ಉಳಿಸಲು ಕಾರ್ಯಸಾಧ್ಯವಾದ ಅಂಗಗಳನ್ನು ದಾನ ಮಾಡಲು ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದರು. ದಾನ ಮಾಡಿದ ಎರಡು ಮೂತ್ರಪಿಂಡಗಳು, ಯಕೃತ್ತು, ಚರ್ಮ ಮತ್ತು ಎರಡು ಕಾರ್ನಿಯಾಗಳು 6 ಜನರ ಜೀವ ಉಳಿಸಲು ಸಹಾಯವಾಗಿದೆ.

ಜೀವನಸಾರ್ಥಕತೆ ಪ್ರೋಟೋಕಾಲ್ ಗಳು ಮತ್ತು ನಿರ್ಧಾರಗಳ ಪ್ರಕಾರ, ಯಕೃತ್ ಅನ್ನು ಅಸ್ಟರ್ ಸಿ ಎಂ ಐ ಆಸ್ಪತ್ರೆ ,ಬೆಂಗಳೂರು, ಒಂದು ಮೂತ್ರಪಿಂಡವನ್ನು ಎ ಜೆ ಆಸ್ಪತ್ರೆ ಮಂಗಳೂರು ಮತ್ತು ಎರಡು ಕಾರ್ನಿಯಾಗಳು, ಒಂದು ಮೂತ್ರಪಿಂಡ ಹಾಗೂ ಚರ್ಮ ವನ್ನು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿನ ನೋಂದಾಯಿತ ರೋಗಿಗಳಿಗೆ ಬಳಸಲಾಯಿತು.

ಶ್ರೀ ಪ್ರಸನ್ನ ಕುಮಾರ್ ಮತ್ತು ಕುಟುಂಬ ಸದಸ್ಯರು “ಅಂಗದಾನ ಒಂದು ಪುಣ್ಯದ ಕೆಲಸ. ಶಿಲ್ಪಾ ಅವರು ಅಂಗದಾನ ಮಾಡಿ ತನ್ನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ ” ಎಂದು ತಿಳಿಸಿದ್ದಾರೆ.

ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ ಅವರು “ಶ್ರೀಮತಿ ಕೊಡೇರಿ ಶಿಲ್ಪಾ ಮಾಧವ ಕುಟುಂಬದ ಈ ಅಂಗಾಂಗ ದಾನದ ಈ ಉದಾತ್ತನಿರ್ಧಾರವು ಜನರ ಬದಲಾಗುತ್ತಿರುವ ಮನಸ್ಥಿತಿಯನ್ನು ತೋರಿಸುತ್ತದೆ. ಇದು ಸ್ವಾಗತಾರ್ಹ ಬದಲಾವಣೆಯಾಗಿದೆ ಮತ್ತು ಇತರರು ಇದನ್ನು ಅನುಕರಿಸುವ ಅಗತ್ಯವಿದೆ. ಎಂದು ಹೇಳಿದರು. ” ಎಂದು ಹೇಳಿದರು. ದಾನ ಮಾಡಿದ ಅಂಗಗಳನ್ನು ಉಡುಪಿ ಮತ್ತು ದಕ್ಷಿಣ ಕನ್ನಡ ಪೊಲೀಸ್ ಇಲಾಖೆಯ ಬೆಂಬಲದೊಂದಿಗೆ ಮಣಿಪಾಲದಿಂದ ಮಂಗಳೂರಿಗೆ ಗ್ರೀನ್ ಕಾರಿಡಾರ್ ಮೂಲಕ ಸ್ವೀಕರಿಸುವ ಆಸ್ಪತ್ರೆಗೆ ವರ್ಗಾಯಿಸಲಾಯಿತು.

ಡಾ. ಅವಿನಾಶ ಶೆಟ್ಟಿ
ವೈದ್ಯಕೀಯ ಅಧೀಕ್ಷಕರು

Right Click Disabled