ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ,

ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ, ಶ್ರೀರಾಮಸೇನೆಯಿಂದ ದೂರು ದಾಖಲು.
ಇತ್ತೀಚಿಗೆ ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಹಾಗೂ ಶ್ರೀರಾಮಸೇನೆ ಸಂಸ್ಥಾಪಕರಾದ ಪ್ರಮೋದ್ ಮುತಾಲಿಕ್ ಬಗ್ಗೆ ಸಾಮಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆಯುತ್ತಿದೆ. ಹಾಗೂ ಶ್ರೀರಾಮಸೇನೆ ಸಂಘಟನೆಯ ಹೆಸರಿನಲ್ಲಿ ನಕಲಿ ಖಾತೆ ತೆರೆದು ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿರುವುದು ಹಾಗೂ ಮತದಾರರಲ್ಲಿ ಗೊಂದಲ ಮೂಡಿಸುತ್ತಿರುವುದರ ವಿರುದ್ಧ ಉಡುಪಿ ಜಿಲ್ಲಾಧಿಕಾರಿ ಹಾಗೂ ಚುನಾವನಣಧಿಕಾರಿ ಯವರಿಗೆ ಶ್ರೀರಾಮಸೇನೆಯ ರಾಜ್ಯ ಕಾರ್ಯಧ್ಯಕ್ಷ ಗಂಗಾಧರ ಕುಲಕರ್ಣಿ ಹಾಗೂ ಮುಖಂಡರು ದಾಖಲೆ ಸಹಿತ ದೂರನ್ನು ನೀಡಲಾಗಿದೆ.