ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಸಮುದಾಯ ಆರೋಗ್ಯ ಅಧಿಕಾರಿಗಳಿಗೆ ನೇತ್ರ ಮತ್ತು ಸಂಬಂಧಿತ ಕಾಯಿಲೆಗಳ ಹಾಗೂ ಅಂಧತ್ವ ನಿಯಂತ್ರಣ ಕಾರ್ಯಕ್ರಮದ ಕುರಿತು ಕಾರ್ಯಾಗಾರ

Spread the love

ಮಣಿಪಾಲ, 26ನೇ ಮೇ 2023:ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಘಟಕ ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಸಮುದಾಯ ಆರೋಗ್ಯ ಅಧಿಕಾರಿಗಳಿಗೆ ಒಂದು ದಿನದ ಕಾರ್ಯಾಗಾರ ಏರ್ಪಡಿಸಲಾಗಿತ್ತು. ಕಾರ್ಯಾಗಾರದಲ್ಲಿ ನೇತ್ರ ಮತ್ತು ಸಂಬಂಧಿತ ಕಾಯಿಲೆಗಳ ಶಿಕ್ಷಣ ಹಾಗೂ ಅಂಧತ್ವ ನಿಯಂತ್ರಣ ಕಾರ್ಯಕ್ರಮದ ಕುರಿತು ಶಿಕ್ಷಣ ನೀಡಲಾಯಿತು.

ಇಂದು ಮಾಹೆ ಮಣಿಪಾಲದ ಇಂಟರಾಕ್ಟ್ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ನಾಗಭೂಷಣ ಉಡುಪ ಅವರು, ಇಡೀ ರಾಜ್ಯದಲ್ಲಿ ಮೊದಲ ಬಾರಿಗೆ ನೇತ್ರಪ್ರಧಾನ ಕಾರ್ಯಕ್ರಮದ ಅಂಗವಾಗಿ ಈ ಕಾರ್ಯಕ್ರಮವನ್ನು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಸಹಯೋಗದೊಂದಿಗೆ ನಡೆಸುತ್ತಿದ್ದೇವೆ. ಈ ಕಾರ್ಯಕ್ರಮವು ಇಡೀ ರಾಜ್ಯಕ್ಕೆ ಮಾದರಿಯಾಗಬೇಕು, ಇದರ ಮೂಲಕ ಹುಟ್ಟಿದ ಮಗುವಿನೊಂದಿಗೆ ಎಲ್ಲರೂ ಅಂಧತ್ವದಿಂದ ಮುಕ್ತರಾಗಬೇಕು ಎಂದು ಆಶಿಸಿದರು. ಇದಕ್ಕೆ ಸಹಕರಿಸುತ್ತಿರುವ ಕಸ್ತೂರ್ಬಾ ಆಸ್ಪತ್ರೆಗೆ ಅಭಿನಂದೆನೆಗಳನ್ನು ಸಲ್ಲಿಸಿದರು.

ಅಧ್ಯಕ್ಷತೆ ವಹಿಸಿದ್ದ ಕೆ ಎಂ ಸಿ ಡೀನ್ ಡಾ ಪದ್ಮರಾಜ್ ಹೆಗ್ಡೆ ಅವರು, ಈಗ ನಾವು ಕಂಪ್ಯೂಟರ್ ಮತ್ತು ತಂತ್ರಜ್ಞಾನ ಕಾಲದಲ್ಲಿ ಇದ್ದೇವೆ. ಸಣ್ಣ ಮಕ್ಕಳಿಂದ ಎಲ್ಲರೂ ಮೊಬೈಲ್ ಮತ್ತು ದೂರದರ್ಶನದಿಂದ ಕಣ್ಣಿನ ಸಮಸ್ಯೆಗೆ ಒಳಪಡುತ್ತಿದ್ದಾರೆ . ಅದಕ್ಕೆ ಸೂಕ್ತ ಸಮಯದಲ್ಲಿ ವೈದ್ಯರಿಗೆ ತೋರಿಸಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಸಮಸ್ಯೆಗೆ ಪರಿಹಾರ ಪಡೆದುಕೊಳ್ಳಬಹುದು. ಇನ್ನು ಮುಂದೆಯೂ ಜಿಲ್ಲಾ ಅರೋಗ್ಯ ಇಲಾಖೆಯ ಯಾವುದೇ ಕಾರ್ಯಕ್ರಮಕ್ಕೆ ನಾವು ಸಹಕರಿಸಲಿದ್ದೇವೆ ಎಂದು ಹೇಳಿದರು.

ಜಿಲ್ಲಾ ಅಂದತ್ವ ನಿಯಂತ್ರಣ ಅಧಿಕಾರಿ ಡಾ ಲತಾ ನಾಯಕ್ ಈ ತರಬೇತಿ ಕಾರ್ಯಕ್ರಮದಿಂದ ನೇತ್ರಕ್ಕೆ ಸಂಬಂದಿಸಿದ ಎಲ್ಲಾ ಕಾಯಿಲೆಗಳನ್ನು ಹಳ್ಳಿ ಹಳ್ಳಿಗಳಲ್ಲಿ ಪತ್ತೆಹಚ್ಚಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗಲು ಸಹಕಾರಿಯಾಗಲಿದೆ ಎಂದರು

ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಅವರು ಅತಿಥಿಗಳಿಗೆ ನೆನಪಿನ ಕಾಣಿಕೆಗಳನ್ನು ಹಸ್ತಾಂತರಿಸಿದರು.

ಸಮುದಾಯ ಆರೋಗ್ಯ ವಿಭಾಗದ ಮುಖ್ಯಸ್ಥ ಡಾ ಅಶ್ವಿನಿ ಕುಮಾರ್ ಗೋಪಾಡಿ ಸ್ವಾಗತಿಸಿ , ನೇತ್ರಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ ಯೋಗೀಶ್ ಕಾಮತ್ ವಂದಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಡಾ.ನೀತಾ ಕೆ.ಐ.ಆರ್, ಸಹ ಪ್ರಾಧ್ಯಾಪಕಿ, ಡಾ.ಸುಶನ ಶೆಟ್ಟಿ, ಸಹಾಯಕ ಪ್ರಾಧ್ಯಾಪಕಿ ಮತ್ತು ಡಾ.ರಶ್ಮಿ ಕೆ ಸಹ ಪ್ರಾಧ್ಯಾಪಕಿ ಭಾಗವಿಸಿದ್ದರು.

ಉಡುಪಿ ಜೆಲ್ಲೆಯ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುಮಾರು 250 ಸಮುದಾಯ ಆರೋಗ್ಯ ಅಧಿಕಾರಿಗಳು ಪಾಲ್ಗೊಂಡು ಇದರ ಪ್ರಯೋಜನ ಪಡೆದುಕೊಂಡರು. ಡಾ ಶ್ರುತಿ ಕಾರ್ಯಕ್ರಮ ನಿರೂಪಿಸಿದರು.

ವೈದ್ಯಕೀಯ ಅಧೀಕ್ಷಕರು

Right Click Disabled