ಉಡುಪಿ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷೀ ಹೆಬ್ಬಾಳಕರ್ ಭೇಟಿ
ರಾಜ್ಯ ಕಾಂಗ್ರೆಸ್ ಸರ್ಕಾರದ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾದ ಬೆಳಗಾವಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು, ಕರ್ನಾಟಕ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಸನ್ಮಾನ್ಯ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ರವರು 11 – 06 -2023 ರಂದು ಭಾನುವಾರ ಬೆಳಿಗ್ಯೆ ಗಂಟೆ 9 .30 ಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನ ಕ್ಕೆ ಭೇಟಿ ನೀಡಲಿದ್ದಾರೆ
ಮಧ್ಯಾಹ್ನ ಗಂಟೆ 12.00 ಕ್ಕೆ ಕ.ರಾ.ರ.ಸಾ. ನಿಗಮ ಡಾ | ವಿ.ಎಸ್ ಆಚಾರ್ಯ ಬಸ್ಸು ನಿಲ್ದಾಣˌ ಬನ್ನಂಜೆ ಉಡುಪಿಯಲ್ಲಿ ಕರ್ನಾಟಕ ರಾಜ್ಯಾದ್ಯಂತ ಮಹಿಳೆಯರಿಗೆ ನಗರ ಸಾರಿಗೆ ˌಸಾಮಾನ್ಯ ಹಾಗೂ ವೇಗದೂತ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣ ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದಾರೆ
ಸಭೆಯಲ್ಲಿ ಸಮಸ್ತ ಜಿಲ್ಲಾ ಕಾಂಗ್ರೆಸ್ ನಾಯಕರು ಬ್ಲಾಕ್ ಅಧ್ಯಕ್ಷರು ವಿವಿಧ ಘಟಕ ಅಧ್ಯಕ್ಷರುಗಳು ಹಿರಿಯ ನಾಯಕರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಕೋರುತ್ತೇನೆ
ಅಶೋಕ್ ಕುಮಾರ್ ಕೊಡವೂರು
ಅಧ್ಯಕ್ಷರು
ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ