ಉಡುಪಿ : ಜಲಾವೃತಗೊಂಡ ತಗ್ಗು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ..!!
ಉಡುಪಿ : ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗುತಿದ್ದು ಇಂತಹ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಭೇಟಿ ನೀಡಿದರು , ಇಲ್ಲಿನ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು
ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ, ಕಳೆದ ಐದು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಗುತ್ತಿದ್ದು, ಇದರ ಪರಿಣಾಮ ಉಡುಪಿಯ ವಿವಿಧೆಡೆ ತಗ್ಗು ಪ್ರದೇಶ ಜಲವೃತವಾಗಿದೆ. ಜನರ ರಕ್ಷಣೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. ಎನ್‌ಡಿಆರ್‌ಎಫ್ ಮತ್ತು ಜನರ ರಕ್ಷಣೆಗೆ ಅಗತ್ಯವಿದ್ದಲ್ಲಿ ಎಸ್‌ಡಿಆರ್‌ಎಫ್ ಸಜ್ಜಾಗಿದೆ ಎಂದರು.
ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ನಿವಾಸಿಗಳನ್ನು ಸ್ಥಳಾಂತರಿಸುವಂತೆ ಮನವಿ ಮಾಡಿದ್ದೇವೆ. ಈ ಪ್ರದೇಶಕ್ಕೆ ಟಾಸ್ಕ್ ಫೋರ್ಸ್ ತಂಡ, ಎಲ್ಲಾ ಇಲಾಖೆಗಳು ಮತ್ತು ಸ್ಥಳೀಯ ಮುಖಂಡರು ನಮಗೆ ಸಹಾಯ ಮಾಡುತ್ತಿದ್ದಾರೆ,
ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ನಮ್ಮೊಂದಿಗೆ ಸಂಪರ್ಕದಲ್ಲಿದ್ದು ಅಗತ್ಯ ಮಾಹಿತಿಗಳನ್ನು ತೆಗೆದುಕೊಂಡಿದ್ದಾರೆ ಮತ್ತು ಪರಿಸ್ಥಿತಿಯನ್ನು ನಿಯಂತ್ರಿಸಲು ನಿರ್ದೇಶನ ನೀಡಿದ್ದಾರೆ ಎಂದಿದ್ದಾರೆ.
ಸಾರ್ವಜನಿಕರು ಮಳೆಯಿಂದ ತುರ್ತು ನೆರವು ಪಡೆಯಲು ಸಾರ್ವಜನಿಕರು 24*7 ಉಚಿತ ಟೋಲ್ ಫ್ರೀ ಸಂಖ್ಯೆ 1077 ಅಥವಾ 0820-2574802 ಯಾವುದೇ ಸಂದರ್ಭದಲ್ಲಿ ಸಂಪರ್ಕಿಸುವಂತೆ ಸೂಚಿಸಲಾಗಿದೆ.