ಉಡುಪಿ: ನೂತನ ಜಿಲ್ಲಾಧಿಕಾರಿಯಾಗಿ ಡಾ.ವಿದ್ಯಾಕುಮಾರಿ ನೇಮಕ

Spread the love

ಉಡುಪಿ : ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾಕುಮಾರಿ ಅವರನ್ನು ನೇಮಿಸಲಾಗಿದೆ.

ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಎಡಿಸಿಯಾಗಿ ಸೇವೆ ಸಲ್ಲಿಸಿದ್ದಾರೆ. ಮೂಲತಃ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾಗಿರುವ ಡಾ.ವಿದ್ಯಾಕುಮಾರಿ 2014ನೇ ಬ್ಯಾಚ್ ನ ಐಎಎಸ್ ಅಧಿಕಾರಿ.

Right Click Disabled