ಡಾ. ಟಿ.ಎಂ.ಎ.ಪೈ ಆಸ್ಪತ್ರೆ ಉಡುಪಿಯಲ್ಲಿ 26ನೇ ಜುಲೈ 2023ರಂದು – ಉಚಿತವಾಗಿ ಮೂಳೆಯ ಖನಿಜಾಂಶಗಳ ಸಾಂದ್ರತೆ ಪರೀಕ್ಷಾ ಶಿಬಿರ
ಆಸ್ಟಿಯೊಪೊರೋಸಿಸ್ ಕಾಯಿಲೆಯನ್ನು ತಡೆಯಲು ಮೂಳೆ ಸಾಂದ್ರತೆ ಪರೀಕ್ಷೆ ಅಗತ್ಯ ಎಂದು ತಜ್ಞರ ಅಭಿಪ್ರಾಯ
ಉಡುಪಿ, 24 ಜುಲೈ 2023: ಮೂಳೆಗಳನ್ನು ದುರ್ಬಲಗೊಳಿಸುವ ಮತ್ತು ಮುರಿತದ ಅಪಾಯವನ್ನು ಹೆಚ್ಚಿಸುವ ಸ್ಥಿತಿಯಾದ ಆಸ್ಟಿಯೊಪೊರೋಸಿಸ್, ಅದರ ಬಗ್ಗೆ ಅರಿವಿನ ಕೊರತೆಯಿಂದಾಗಿ ಪತ್ತೆಯಾಗುವುದೇ ಇ ಲ್ಲ. ಇದು ಪ್ರಧಾನವಾಗಿ ಋತುಬಂಧಕ್ಕೊಳಗಾದ ಮಹಿಳೆಯರ ಮೇಲೆ ಪರಿಣಾಮ ಬೀರುತ್ತದೆ ಮತ್ತು ಅದರ ಹೆಚ್ಚುವುದನ್ನು ತಡೆಗಟ್ಟಲು ಆರಂಭಿಕ ರೋಗನಿರ್ಣಯವು ನಿರ್ಣಾಯಕವಾಗಿದೆ. ಈ ಹಿನ್ನೆಲೆಯಲ್ಲಿ ಆರ್ಥೋಪೆಡಿಕ್ಸ್ ವಿಭಾಗದ ಮುಖ್ಯಸ್ಥ ಡಾ.ರಾಜಾರಾಂ ಪೈ, ಡಾ.ಟಿ.ಎಂ.ಎ. ಪೈ ಆಸ್ಪತ್ರೆ, ಉಡುಪಿ, ಆಸ್ಟಿಯೊಪೊರೋಸಿಸ್ ತೊಂದರೆಯನ್ನು ಪತ್ತೆಹಚ್ಚುವಲ್ಲಿ ಬೋನ್ ಮಿನರಲ್ ಡೆನ್ಸಿಟಿ (BMD) ಪರೀಕ್ಷೆಯ ಮಹತ್ವವನ್ನು ಒತ್ತಿಹೇಳುತ್ತಾರೆ.
ದೇಹವು ಹೊಸ ಮೂಳೆಗಳನ್ನು ಸಮರ್ಪಕವಾಗಿ ರೂಪಿಸಲು ವಿಫಲವಾದಾಗ ಅಥವಾ ಅಸ್ತಿತ್ವದಲ್ಲಿರುವ ಮೂಳೆಗಳ ನಾಶ ಹೆಚ್ಚಾದಾಗ ಆಸ್ಟಿಯೊಪೊರೋಸಿಸ್ ಸಂಭವಿಸುತ್ತದೆ. ಯಾವುದೇ ನೋವು – ಗಾಯ ಇಲ್ಲದೇ ಮಾಡುವ BMD ಪರೀಕ್ಷೆಗೆ ಒಳಗಾಗುವ ಮೂಲಕ, ವ್ಯಕ್ತಿಗಳು ತಮ್ಮ ಮೂಳೆಗಳ ಸಾಂದ್ರತೆಯನ್ನು ಕಂಡು ಹಿಡಿಯಬಹುದು ಮತ್ತು ಸ್ಥಿತಿಯನ್ನು ನಿರ್ವಹಿಸುವಲ್ಲಿ ಸೂಕ್ತ ಮಾರ್ಗದರ್ಶನವನ್ನು ಪಡೆಯಬಹುದು.
ಆರಂಭಿಕ ಪತ್ತೆಯ ಮಹತ್ವವನ್ನು ತಿಳಿಸಲು ಮತ್ತು ಮೂಳೆಯ ಆರೋಗ್ಯವನ್ನು ಉತ್ತೇಜಿಸಲು, ಡಾ.ಟಿ.ಎಂ.ಎ. ಪೈ ಆಸ್ಪತ್ರೆಯು 26ನೇ ಜುಲೈ 2023 ರಂದು ಆರ್ಥೋಪೆಡಿಕ್ಸ್ ವಿಭಾಗದಲ್ಲಿ ಉಚಿತ ಬೋನ್ ಮಿನರಲ್ ಡೆನ್ಸಿಟಿ ಶಿಬಿರವನ್ನು ಬೆಳಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಆಯೋಜಿಸುತ್ತಿದೆ. ಶಿಬಿರವು 40 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳಿಗೆ, ವಿಶೇಷವಾಗಿ ಹೆಚ್ಚಿನ ಅಪಾಯದಲ್ಲಿರುವ ಮಹಿಳೆಯರಿಗೆ ತೆರೆದಿರುತ್ತದೆ. 100 ವ್ಯಕ್ತಿಗಳಿಗೆ ಸೀಮಿತವಾಗಿದೆ, ನೋಂದಣಿ ಮೊದಲು ಬಂದವರಿಗೇ ಮೊದಲ ಸೇವೆಯ ಆಧಾರದ ಮೇಲೆ ಇರುತ್ತದೆ. ನೋಂದಣಿಗಾಗಿ, ದಯವಿಟ್ಟು 0820-2526501 Extn – 2164 ಅನ್ನು ಸಂಪರ್ಕಿಸಿ
“ಚಿಕಿತ್ಸೆಗಿಂತ ತಡೆಗಟ್ಟುವಿಕೆ ಉತ್ತಮವಾಗಿದೆ ಎಂದು ನಾವು ನಂಬುತ್ತೇವೆ ಮತ್ತು BMD ಪರೀಕ್ಷೆಯ ಮೂಲಕ ಆಸ್ಟಿಯೊಪೊರೋಸಿಸ್ ತೊಂದರೆಯನ್ನು ಮೊದಲೇ ಪತ್ತೆಹಚ್ಚುವುದರಿಂದ ಮೂಳೆ ಮುರಿತಗಳು ಮತ್ತು ಸಂಬಂಧಿತ ತೊಡಕುಗಳ ಅಪಾಯವನ್ನು ಗಣನೀಯವಾಗಿ ಕಡಿಮೆ ಮಾಡಬಹುದು” ಎಂದು ಡಾ. ಟಿ.ಎಂ.ಎ. ಪೈ ಆಸ್ಪತ್ರೆ, ಉಡುಪಿಯ ವೈದ್ಯಕೀಯ ಅಧೀಕ್ಷಕ ಡಾ. ಶಶಿಕಿರಣ್ ಉಮಾಕಾಂತ್ ಹೇಳುತ್ತಾರೆ.
ಶಿಬಿರದ ವಿವರಗಳು:
ದಿನಾಂಕ: 26ನೇ ಜುಲೈ 2023
ಸಮಯ: ಬೆಳಗ್ಗೆ 9 ರಿಂದ ಮಧ್ಯಾಹ್ನ 3
ಸ್ಥಳ: ಆರ್ಥೋಪೆಡಿಕ್ಸ್ ವಿಭಾಗದ ಡಾ.ಟಿ.ಎಂ.ಎ. ಪೈ ಆಸ್ಪತ್ರೆ, ಉಡುಪಿ
ಅರ್ಹತೆ: 40 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು
ನೋಂದಣಿ: 0820-2526501 Extn – 2164 ಸಂಪರ್ಕಿಸಿ
ಡಾ. ಶಶಿಕಿರಣ್ ಉಮಾಕಾಂತ್
ವೈದ್ಯಕೀಯ ಅಧೀಕ್ಷಕರು , ಡಾ ಟಿ ಎಂ ಎ ಪೈ ಆಸ್ಪತ್ರೆ ಉಡುಪಿ