ರಾಜ್ಯಾಧ್ಯಕ್ಷರಾದ ಟಿ. ಎ. ನಾರಾಯಣಗೌಡರ ಸಾರಾಥ್ಯದ *31 ಜಿಲ್ಲೆಯಲ್ಲಿರುವ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಒಟ್ಟುಗೂಡಿ ಉಡುಪಿ ಜಿಲ್ಲೆ ಮತ್ತು ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸುವುದು

Spread the love

02.11.2023: ಕರ್ನಾಟಕ ರಕ್ಷಣಾ ವೇದಿಕೆ ಟಿ. ಎ. ನಾರಾಯಣಗೌಡರ ಬಣದ ಉಡುಪಿ ಜಿಲ್ಲಾ ಘಟಕದ ಮೂಲಕ ಗಮನಕ್ಕೆ ತರುವ ವಿಷಯವೇನೆಂದರೆ, ನಿನ್ನೆ ಬೈಂದೂರು ತಾಲೂಕು ಆಡಳಿತ ಮಂಡಳಿಯ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ನಡೆಸಿ, ಎಲ್ಲೂ ಸಹ ಕನ್ನಡ ಧ್ವಜ ಹಾಕದೇ, ಪ್ರವಾಸಿ ಮಂದಿರದ ಆವರಣದಲ್ಲಿ ಕೇವಲ ಕಾಟಾಚಾರಕ್ಕೋಸ್ಕರ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಿ, ನಮ್ಮ ಕನ್ನಡ ದ್ವಜಕ್ಕೆ ಗೌರವವನ್ನು ಕೊಡದಿರುವುದು ಖಂಡನೀಯ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಬೈಂದೂರು ತಾಲೂಕು ತಹಸೀಲ್ದಾರರ ಮೇಲೆ ಶೀಘ್ರ ಕಾನೂನು ಕ್ರಮವನ್ನು ಜರುಗಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕನ್ನಡ ರಾಜ್ಯೋತ್ಸವದ ಅಗೌರವ ತೋರಿದ ತಹಸಿಲ್ದಾರರ ವಿರುದ್ಧ *ರಾಜ್ಯಾಧ್ಯಕ್ಷರಾದ ಟಿ. ಎ. ನಾರಾಯಣಗೌಡರ ಸಾರಾಥ್ಯದ *31 ಜಿಲ್ಲೆಯಲ್ಲಿರುವ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಒಟ್ಟುಗೂಡಿ ಉಡುಪಿ ಜಿಲ್ಲೆ ಮತ್ತು ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುವುದೆಂಬ ಮನವಿಯನ್ನು ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿಯವರ ಸಾರಥ್ಯದಲ್ಲಿ* ಜಿಲ್ಲಾಧಿಕಾರಿಗಳ ಪರವಾಗಿ ಅಪರ ಜಿಲ್ಲಾಧಿಕಾರಿಣಿ ಮಮತಾ ದೇವಿ ಜಿ. ಎಸ್. ರವರಿಗೆ ನೀಡಲಾಯಿತು.

ಈ ಸಂಧರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ರಾಘವೇಂದ್ರ ನಾಯಕ್, ಜಿಲ್ಲಾ ಉಪಾಧ್ಯಕ್ಷರಾದ ಕುಶಲ್ ಅಮೀನ್ ಬೆಂಗ್ರೆ, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷರಾದ ಜಯ ಪೂಜಾರಿ, ಜಿಲ್ಲಾ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಸಂತೋಷ ಕುಲಾಲ್, ಜಿಲ್ಲಾ ಮಹಿಳಾ ಘಟಕದ ಉಪಾಧ್ಯಕ್ಷರಾದ ದೇವಕಿ ಬಾರ್ಕೂರ್, ಜಿಲ್ಲಾ ಮಹಿಳಾ ಘಟಕದ ಸಂಘಟನಾ ಕಾರ್ಯದರ್ಶಿಯಾದ ಜ್ಯೋತಿ, ಜಿಲ್ಲಾ ಸಹ ಸಾಂಸ್ಕೃತಿಕ ಕಾರ್ಯದರ್ಶಿ ಪ್ರಮೋದ್ ಕುಲಾಲ್, ಜಿಲ್ಲಾ ಸಹ ಸಾಂಸ್ಕೃತಿಕ ಕಾರ್ಯದರ್ಶಿ ಜ್ಯೋತಿ ಆರ್. ಉಡುಪಿ ತಾಲೂಕು ಘಟಕದ ಅಧ್ಯಕ್ಷರಾದ ಪ್ರಭಾಕರ್ ರಾಜ್ ಪೂಜಾರಿ, ಉಡುಪಿ ತಾಲೂಕು ಮಹಿಳಾ ಅಧ್ಯಕ್ಷರಾದ ಮಮತಾ, ಮೊದಲಾದವರು ಉಪಸ್ಥಿತರಿದ್ದರು.

Right Click Disabled