ವಾಣಿಯವರ ಚಿನ್ನದ ಬೇಟೆ
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಬೆಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವುಗಳ ಸಹಯೋಗದಲ್ಲಿ ರಾಜ್ಯ ಸರಕಾರಿ ನೌಕರರಿಗಾಗಿ ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಉಡುಪಿಯ ಜಿಲ್ಲಾ ನ್ಯಾಯಾಂಗ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾದ ವಾಣಿ ಇವರು 50 ಮೀಟರ್ ಬ್ಯಾಕ್ ಸ್ಟ್ರೋಕ್ ನಲ್ಲಿ ಚಿನ್ನದ ಪದಕ, 50 ಮೀಟರ್ ಬ್ರೆಸ್ಟ್ ಸ್ಟ್ರೋಕ್ ನಲ್ಲಿ ಚಿನ್ನದ ಪದಕ ಹಾಗೂ 50 ಮೀಟರ್ ಬಟರ್ ಫೈ ನಲ್ಲಿ ಚಿನ್ನದ ಪದಕಗಳನ್ನು ಪಡೆದು ಸತತ ನಾಲ್ಕನೇ ಬಾರಿ ರಾಷ್ಟ್ರಮಟ್ಟದ ಅಖಿಲ ಭಾರತ ನಾಗರಿಕ ಸೇವಾ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಾಣಿಯವರು ಅಂಚೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಾಲಚಂದ್ರ ಕೆ. ಆರ್ ಇವರ ಪತ್ನಿಯಾಗಿರುತ್ತಾರೆ.