ಉಡುಪಿ | ಇಂದ್ರಾಳಿ ಕೊಲೆ ಪ್ರಕರಣ; ಆರೋಪಿಗಳು ಖುಲಾಸೆ

Spread the love

ಉಡುಪಿ: ನಗರ ಪೋಲಿಸ್‌ ಠಾಣೆಯ ವ್ಯಾಪ್ತಿಯ ಇಂದ್ರಾಳಿ ರೈಲ್ವೆ ಸ್ಟೇಷನ್‌ ನಾಗಬನ ಬಳಿಯ ಸೇತುವೆ ಹತ್ತಿರ 2022ರ ಜುಲೈ 21ರಂದು ನಡೆದ ವ್ಯಕ್ತಿಯ ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಪ್ರಕರಣ ಸಾಬೀತುಪಡಿಸಲು ಪ್ರಾಸಿಕ್ಯೂಷನ್‌ ವಿಫ‌ಲವಾದ ಹಿನ್ನೆಲೆಯಲ್ಲಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಕುಮಾರ್‌ ಎನ್ನುವರ ಮೇಲೆ ವಿಘ್ನೇಶ್‌ ಕುಟ್ಟಿ ಮತ್ತು ನವೀನ್‌ ಕುಮಾರ್‌ ಎನ್ನುವರು ಆತ ತನ್ನ ತಾಯಿಯ ಬಗ್ಗೆ ಅವ್ಯಾಚ್ಯ ಶಬ್ದಗಳಿಂದ ಬೈದುದರಿಂದ ಕೋಪಗೊಂಡ ಆರೋಪಿಗಳು ದೊಣ್ಣೆಯಿಂದ ಕುಮಾರ್‌ನ ತಲೆಗೆ ಹೊಡೆದು ತೀವ್ರ ಗಾಯ ಉಂಟು ಮಾಡಿದ್ದರ ಪರಿಣಾಮ ಆತ ಸ್ಥಳದಲ್ಲಿ ಮೃತಪಟ್ಟಿದ್ದನು. ಪೊಲೀಸರು ಈ ಕೊಲೆ ಪ್ರಕರಣದ ಸಂಬಂಧ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ ಅಂತಿಮ ವರದಿಯನ್ನು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಪೊಲೀಸರು ಅಂತಿಮ ವರದಿಯಲ್ಲಿ ನಮೂದಿಸಿದ ಎಲ್ಲ ಸಾಕ್ಷಿಗಳನ್ನು ವಿಚಾರಣೆ ಮಾಡಿ ಆರೋಪಿಗಳ ವಿರುದ್ಧ ಪ್ರಕರಣ ಸಾಬೀತುಪಡಿಸಲು ಪ್ರಾಸಿಕ್ಯೂಷನ್‌ ವಿಫ‌ಲವಾಗಿದೆ ಎಂದು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ದಿನೇಶ್‌ ಹೆಗ್ಡೆ ಅವರು ಆರೋಪಿಗಳನ್ನು ಪ್ರಕರಣದಿಂದ ಖುಲಾಸೆಗೊಳಿಸಿರುತ್ತಾರೆ. ಈ ಪ್ರಕರಣದಲ್ಲಿ ಆರೋಪಿಗಳ ಪರವಾಗಿ ನ್ಯಾಯವಾದಿ ಚೇರ್ಕಾಡಿ ಅಖೀಲ್‌ ಬಿ.ಹೆಗ್ಡೆ ವಾದಿಸಿದ್ದಾರೆ.

Right Click Disabled