ಉಡುಪಿ ಜಿಲ್ಲೆಯ ನೂತನ ಆಡಳಿತಾತ್ಮಕ
ಉಡುಪಿ ಜಿಲ್ಲೆಯ ನೂತನ ಆಡಳಿತಾತ್ಮಕ ನ್ಯಾಯಮೂರ್ತಿಗಳಾಗಿ ನೇಮಕಗೊಂಡ ಹೈಕೋರ್ಟ್ ನ್ಯಾಯಮೂರ್ತಿ ಶ್ರೀ ಇ. ಎಸ್. ಇಂದಿರೇಶ್ ಅವರನ್ನು ಇಂದು ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಭೇಟಿಯಾದ ಉಡುಪಿ ವಕೀಲರ ಸಂಘದ ನಿಯೋಗವು ಅವರಿಗೆ ಪುಷ್ಪಗುಚ್ಛ ನೀಡಿ ಅಭಿನoದಿಸಿತು. ನಿಯೋಗದಲ್ಲಿ ಉಡುಪಿ ವಕೀಲರ ಸಂಘದ ಅಧ್ಯಕ್ಷ ಶ್ರೀ ರೆನೋಲ್ಡ್ ಪ್ರವೀಣ್ ಕುಮಾರ್, ಪದಾಧಿಕಾರಿಗಳಾದ ಶ್ರೀ ಆರೂರು ಸುಕೇಶ್ ಶೆಟ್ಟಿ, ಶ್ರೀ ಸಂತೋಷ್ ಕುಮಾರ್ ಮೂಡುಬೆಳ್ಳೆ, ಶ್ರೀ ಬೈಲೂರು ರವೀಂದ್ರ ದೇವಾಡಿಗ, ಶ್ರೀ ರಜನಿಕಾಂತ್ ಉಪಸ್ಥಿತರಿದ್ದರು.