ಸಂರಕ್ಷಣೆ ನಿಟ್ಟಿನಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ಜನಪ್ರತಿನಿಧಿಗಳ ಸಭೆಯಲ್ಲಿ ಸಮ್ಮತಿ
ಪಶ್ಚಿಮ ಘಟ್ಟ ಸಂರಕ್ಷಣೆ ನಿಟ್ಟಿನಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ಜನಪ್ರತಿನಿಧಿಗಳ ಸಭೆಯಲ್ಲಿ ಸಮ್ಮತಿ
ಕರ್ನಾಟಕದಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಿಸುವ ನಿಟ್ಟಿನಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಸಭೆಯಲ್ಲಿ ಸಮ್ಮತಿ ಸಿಕ್ಕಿದೆ. ಕಸ್ತೂರಿ ರಂಗನ್ ಸಮಿತಿ ವರದಿಯಲ್ಲಿ ರಾಜ್ಯದಲ್ಲಿ 20,668 ಚದರ ಕಿ.ಮೀ ಪರಿಸರ ಸೂಕ್ಷ್ಮ ವಲಯ ಗುರುತಿಸಲಾಗಿದೆ ಎಂದು ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಕಸ್ತೂರಿ ರಂಗನ್ ವರದಿ ಜಾರಿಗೆ ಜನಪ್ರತಿನಿಧಿಗಳ ಸಭೆಯಲ್ಲಿ ಸಮ್ಮತಿ. ಸಚಿವ ಈಶ್ವರ್ ಖಂಡ್ರೆ ಕರ್ನಾಟಕದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16,114 ಚದರ ಕಿಲೋಮೀಟರ್ ಪರಿಸರ ಸೂಕ್ಷ್ಮ ಪ್ರದೇಶವನ್ನು ಈಗಾಗಲೇ ಸಂರಕ್ಷಿಸಲಾಗಿದ್ದು, ಈ ಮಿತಿಗೆ ಒಳಪಟ್ಟು ಕಸ್ತೂರಿ ರಂಗನ್ ವರದಿಯನ್ನು ಸಮ್ಮತಿಸಬಹುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕುರಿತಂತೆ ಕೇಂದ್ರ ಸರ್ಕಾರ ಆ.2ರಂದು 6ನೇ ಅಧಿಸೂಚನೆ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ನಿಲುವು ಸಲ್ಲಿಸಬೇಕಿದ್ದು, 11 ಜಿಲ್ಲೆಗಳ ಜನಪ್ರತಿನಿಧಿಗಳ ಸಭೆ ಇಂದು ಮಾಡಲಾಗಿದೆ. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಕಸ್ತೂರಿ ರಂಗನ್ ಸಮಿತಿ ವರದಿಯಲ್ಲಿ ರಾಜ್ಯದಲ್ಲಿ 20,668 ಚದರ ಕಿ.ಮೀ ಪರಿಸರ ಸೂಕ್ಷ್ಮ ವಲಯ ಗುರುತಿಸಲಾಗಿದೆ. ಈ ಬಗ್ಗೆ ಭೌತಿಕ ಸರ್ವೆ ನಡೆಸಿದರೆ ಈ ಪ್ರದೇಶ ಇನ್ನೂ ಹೆಚ್ಚಳವಾಗಲಿದೆ ಎಂಬ ಅಭಿಪ್ರಾಯವನ್ನೂ ಜನಪ್ರತಿನಿಧಿಗಳು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ. ಹಲವು ತಲೆಮಾರುಗಳಿಂದ ಅರಣ್ಯ ಪ್ರದೇಶದಲ್ಲೇ ಜೀವನ ನಡೆಸುತ್ತಿರುವವರನ್ನು ಒಕ್ಕಲೆಬ್ಬಿಸುವುದು ಸೂಕ್ತವಲ್ಲ. ಅವರಿಗೆ ಬೇರೆ ಕಡೆ ಪುನರ್ವಸತಿ ಕಲ್ಪಿಸಿದರೂ ಅವರು ಅಲ್ಲಿಗೆ ಹೋಗುವುದಿಲ್ಲ ಎಂಬ ಅಭಿಪ್ರಾಯವೂ ಸಭೆಯಲ್ಲಿ ವ್ಯಕ್ತವಾಗಿದ್ದು ಹೀಗಾಗಿ ನಾಳೆಯ ಸಚಿವ ಸಂಪುಟ ಸಭೆಯಲ್ಲಿ ಈ ಎಲ್ಲ ವಿಚಾರಗಳ ಬಗ್ಗೆ ಚಿಂತನ ಮಂಥನ ನಡೆಸಲಾಗುವುದು ಎಂದಿದ್ದಾರೆ.