14 ಸೈಟ್ ವಾಪಸಾತಿ, ಕೋರ್ಟ್ ಆದೇಶ ಉಲ್ಲಂಘನೆ – ಮೂಡಾ – ಆಯುಕ್ತರ ಬಂಧನಕ್ಕೆ ಕೇಂದ್ರ HDK ಆಗ್ರಹ

Spread the love


ಬೆಂಗಳೂರು: ನ್ಯಾಯಾಲಯಗಳ ಆದೇಶ ಉಲ್ಲಘಿಸಿ ಸಿಎಂ ಪತ್ನಿ ಅವರಿಂದ ನಿವೇಶನಗಳನ್ನು ವಾಪಸ್ ಪಡೆದಿರುವ ಮೂಡಾ ಆಯುಕ್ತರನ್ನು ಕೂಡಲೇ ಬಂಧಿಸಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಮೂಡಾ ಹಗರಣವನ್ನು ಮುಚ್ಚಿ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಲೋಕಾಯುಕ್ತ ಅಧಿಕಾರಿಗಳು ಹಾಗೂ ಮೂಡಾ ಅಧಿಕಾರಿಗಳು ವ್ಯವಸ್ಥಿತವಾಗಿ ಶಾಮೀಲಾಗಿದ್ದಾರೆ ಎಂದು ಅವರು ಗಂಭೀರ ಆರೋಪ ಮಾಡಿದರು. ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರ ಪತ್ನಿ 14 ನಿವೇಶನಗಳನ್ನು ವಾಪಸ್ ನೀಡಿರುವ ಕ್ರಮದ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅವರು, ನಿವೇಶನಗಳನ್ನು ಹಿಂದಕ್ಕೆ ಪಡೆದಿರುವುದು ನ್ಯಾಯಾಲಯದ ಆದೇಶದ ಸ್ಪಷ್ಟ ಉಲ್ಲಂಘನೆ ಮತ್ತು ನ್ಯಾಯಾಂಗ ನಿಂದನೆ. ಹೀಗಾಗಿ ಮುಡಾ ಆಯುಕ್ತರನ್ನು ಬಂಧಿಸಬೇಕು ಎಂದು ಅವರು ಒತ್ತಾಯಿಸಿದರು. ನಿವೇಶನಗಳನ್ನು ಹಿಂದಕ್ಕೆ ಕೊಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಕ್ಷ್ಯನಾಶಕ್ಕೆ ಪ್ರಯತ್ನಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿರುವ ಅವರು ತಮ್ಮ ಅಧಿಕಾರದ ಪ್ರಭಾವದಿಂದ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಇದೆಲ್ಲವನ್ನೂ ಮಾಡುತ್ತಿದ್ದಾರೆ ಎಂದು ಹೇಳಿದರು.

Right Click Disabled