ಕೆನರಾ ಬ್ಯಾಂಕ್‌ ಕಳ್ಳತನ: ಮತ್ತೆ 12 ಜನರನ್ನು ಬಂಧಿಸಿ 39 ಕೆಜಿ ಬಂಗಾರ ಹಾಗೂ 1.16 ಕೋಟಿ ನಗದು ವಶಕ್ಕೆ

Spread the love

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಕೆನರಾ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಮತ್ತೇ 12 ಜನರನ್ನು ಬಂಧಿಸಲಾಗಿದೆ ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಚೇತನ ಸಿಂಗ್ ವಿಜಯಪುರ ತಿಳಿಸಿದರು.

53.26 ಕೋಟಿ ಮೌಲ್ಯದ 58.97 ಕೆಜಿ ಬಂಗಾರದ ಆಭರಣ ಹಾಗೂ 5,20,450 ಹಣ ಕದ್ದಿದ್ದ ದರೋಡೆ ಮಾಡಿಕೊಂಡು ಹೋಗಿದ್ದರು.
ಒಟ್ಟು 53,31,20,450 ಮೌಲ್ಯದ ಬಂಗಾರದ ಆಭರಣ ಹಾಗೂ ನಗದು ಕಳ್ಳತನ ಮಾಡಿದ್ದಲ್ಲದೆ ಬ್ಯಾಂಕಿನ ಸಿಸಿ ಕ್ಯಾಮೆರಾ ಎನ್ ವಿ ಆರ್ ಸಹ ತೆಗೆದುಕೊಂಡು ಹೋಗಿದ್ದ ಕಳ್ಳರು ಇಂದು ಮತ್ತೆ 12 ಜನರನ್ನು ಬಂಧಿಸಲಾಗಿದೆ ಐಜಿಪಿ ಅವರು ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ.

ಈಗಾಗಲೇ ಮೂರು ಜನರನ್ನು ಬಂಧಿಸಿ 10.75 ಕೋಟಿ ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿತ್ತು. ಮೂರು ಜನರನ್ನು ಬಂಧಿಸಿ ಅವರನ್ನು ವಿಚಾರಿಸಿ ತನಿಖೆ ನಡೆಸಿ ಇಲ್ಲಿಯ ವರೆಗೆ 15 ಜನರ ಆರೋಪಿಗಳ ಬಂಧನವಾಗಿದೆ ಎಂದರು. ಬಾಲರಾಜ್ ಮಣಿಕಮ್ ಯರೆಕುಲಾ, ಚಂದನರಾಜ್ ಪಿಳ್ಳೆ, ಗುಂಡು ಜೋಸೆಫ್ ಶ್ಯಾಮಬಾಬು, ಪೀಟರ್ ಚಂದ್ರಪಾಲ್, ಇಜಾಜ್ ಧಾರವಾಡ, ಸುಸೈರಾಜ್ ಡ್ಯಾನಿಯಲ್, ಬಾಬುರಾವ್‌ ಮಿರಿಯಾಲ್, ಮಹಮ್ಮದ್ ಆಸೀಫ್ ಕಲ್ಲೂರ, ಅನಿಲ್ ಮಿರಿಯಾಲ್, ಮೋಹನಕುಮಾರ, ಸುಲೇಮನ್‌ವೇಸ್ಲಿ ಪಲುಕುರಿ, ಮರಿಯಾದಾಸ ಗೋನಾ ಬಂಧಿತ ಆರೋಪಿಗಳು.

ಬಂಧಿತರು ಹುಬ್ಬಳ್ಳಿ ಮೂಲದವರು. ಅಲ್ಲದೇ ಈ ಹಿಂದೆ ಮೂವರು ಆರೋಪಿಗಳ ಬಂಧನ ಮಾಡಲಾಗಿತ್ತು. ಇದೀಗ್ ಬಂಧಿತ ಆರೋಪಿಗಳಿಂದ 39 ಕೆಜಿ ಗಟ್ಟಿ ಬಂಗಾರ, 1.16 ಕೋಟಿ ನಗದು, ಕೃತ್ಯಕ್ಕೆ ಬಳಸಿದ ವಾಹನಗಳು ಸೇರಿದಂತೆ 39.26 ಕೋಟಿ ಅಧಿಕ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.

ಈ ಖದೀಮರನ್ನು ಭೇಧಿಸುವಲ್ಲಿ ಯಶಸ್ವಿಯಾಗಿದ್ದ ವಿಜಯಪುರ ಜಿಲ್ಲೆಯ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ , ಸಿ ಪಿ ಐ ,ಪಿ ಎಸ್ ಐ ಗಳು ಹಾಗೂ ಪೊಲೀಸ್ ಸಿಬ್ಬಂದಿಯವರಿಗೆ ಅಲ್ಲದೆ ಮನಗೂಳಿಯ ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿಗಳಾದ ಶಬೀರ್ ರೇವೂರಕರ್ ಹಾಗೂ ಸಿಬ್ಬಂದಿ ಇಬ್ಬರಿಗೆ ಇಂದು ಬೆಳಗಾವಿ ಉತ್ತರ ವಲಯದ ಐಜಿಪಿ ಚೇತನ ಸಿಂಗ್ ರಾಥೋರ್ ಅವರು ಸುಮಾರು ನೂರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ ಅಭಿನಂದಿಸಿದರು.

ಮಲ್ಲಿಕಾರ್ಜುನ ಮ ಬುರ್ಲಿ

Right Click Disabled