ಸರಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳ ಜೊತೆ ಊಟ – ಮಾನ್ಯ ಅಧ್ಯಕ್ಷರು ಹಾಗೂ ಅಧಿಕಾರಿಗಳಿಂದ ಶಿಕ್ಷಣ ಕ್ಷೇತ್ರಕ್ಕೆ ಗಮನ.

Spread the love

ಇಂದು ಮನಗೂಳಿ ಪಟ್ಟಣದ ಗಂಡು ಮತ್ತು ಹೆಣ್ಣು ಮಕ್ಕಳ ಸರ್ಕಾರಿ ಪ್ರಾಥಮಿಕ ಶಾಲೆಗೆ ಮಾನ್ಯ ಪಟ್ಟಣ ಪಂಚಾಯತ ಅಧ್ಯಕ್ಷರಾದ ಡಾ. ಎಂ.ಡಿ. ಮೇತ್ರಿ, ಮುಖ್ಯಾಧಿಕಾರಿ ಶ್ರೀ ಎಸ್.ಐ. ರೇವುರಕರ್ ಹಾಗೂ ಪಂಚಾಯತ್ ಸದಸ್ಯರುಗಳು ಭೇಟಿ ನೀಡಿ ಶಾಲೆಯ ಸ್ಥಿತಿ-ಗತಿಯ ಕುರಿತು ಸ್ಥಳ ಪರಿಶೀಲನೆ ನಡೆಸಿದರು.

ಶಾಲೆಯ ಮೂಲಸೌಕರ್ಯ, ಶೌಚಾಲಯದ ಸೌಲಭ್ಯ, ಕುಡಿಯುವ ನೀರಿನ ವ್ಯವಸ್ಥೆ ಮತ್ತು ಬಿಸಿಯೂಟದ ಗುಣಮಟ್ಟ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಸ್ಪಷ್ಟವಾಗಿ ವೀಕ್ಷಿಸಿ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿದರು.

ಈ ಸಂಧರ್ಭದಲ್ಲಿ ಅಧಿಕಾರಿಗಳು ಮಕ್ಕಳ ಜೊತೆಯಲ್ಲಿ ಕುಳಿತು ಬಿಸಿಯೂಟವನ್ನು ಸೇವಿಸಿ, ಆಹಾರದ ಗುಣಮಟ್ಟವನ್ನು ಸ್ವತಃ ಪರೀಕ್ಷಿಸಿದರು. ಮಕ್ಕಳೊಂದಿಗೆ ಸಂವಾದ ನಡೆಸಿದ ಅಧ್ಯಕ್ಷರು ಹಾಗೂ ಮುಖ್ಯಾಧಿಕಾರಿಗಳು, ವಿದ್ಯಾರ್ಥಿಗಳ ಅಭಿಪ್ರಾಯವನ್ನೂ ಕೇಳಿದರು ಮತ್ತು ಶಾಲೆಯ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಮಾನ್ಯ ಅಧ್ಯಕ್ಷರ ಭೇಟಿಯಿಂದ ಶಾಲಾ ಶಿಕ್ಷಕರಲ್ಲಿ ಹಾಗೂ ಮಕ್ಕಳ ಪೋಷಕರಲ್ಲಿ ಒಂದು ಹೊಸ ಆತ್ಮವಿಶ್ವಾಸವನ್ನು ಹುಟ್ಟುಹಾಕಿದ್ದು, ಸಾರ್ವಜನಿಕರಿಗೆ ಆಶಾದಾಯಕ ಬೆಳಕು ನೀಡಿದೆ.

ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಉಪಾಧ್ಯಕ್ಷರಾದ ಶ್ರೀ ಚಂದ್ರಶೇಖರಗೌಡ ಬಿರಾದಾರ, ಸದಸ್ಯರುಗಳಾದ ಶ್ರೀ ಪ್ರಕಾಶ ಮನಗೂಳಿ, ಶ್ರೀ ರಾಜು ವಾಲಿಕಾರ_ ಶ್ರೀ ರಮೇಶ ಪಿರಗಾ ಹಾಗೂ ಇನ್ನುಳಿದ ಸದಸ್ಯರುಗಳು ಕೂಡಾ ಉಪಸ್ಥಿತರಿದ್ದರು.

ಮಲ್ಲಿಕಾರ್ಜುನ ಮ ಬುರ್ಲಿ

Right Click Disabled